MLA Vinay Kulkarni
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಿ ಒಂದು ವಾರದೊಳಗೆ ಕೋರ್ಟ್ ಮುಂದೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಕಳೆದ 2016ರ ಜೂನ್.15ರಂದು ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಯೋಗೇಶ್ ಗೌಡನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಇದರಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಿಸಿ, 2020ರ ನವೆಂಬರ್.5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…