Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ಇಡಿ

kc veerendra pappy

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ.

ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಡಿ ದಾಳಿ ವೇಳೆ ವೀರೇಂದ್ರ ಪಪ್ಪಿಗೆ ಸೇರಿದ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ 12 ಕೋಟಿ ಹಣ ಜಪ್ತಿ ಮಾಡಲಾಗಿದೆ. 6 ಕೋಟಿ ರೂ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳನ್ನು ಜಪ್ತಿ ಮಾಡಲಾಗಿದೆ.

Tags:
error: Content is protected !!