ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.
ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಬೆಳಿಗ್ಗೆಯೇ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಈ ನಡುವೆ ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.





