ಬೆಂಗಳೂರು: ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೈ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ ಆರು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ನೀಡಿದೆ. ಜೊತೆಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಸೂಚನೆ ನೀಡಿದೆ.
ಶುದ್ಧ ಆಹಾರವನ್ನು ನೀಡಬೇಕು. ಮೆಡಿಸನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು. ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯವರನ್ನು ಇ.ಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪದ ಮೇಲೆ ಬಂಧಿಸಿದ್ದರು. ಅವರ ಮನೆಯಲ್ಲಿ ಮತ್ತು ಸಂಬಂಧಪಟ್ಟ ಕಡೆ ದಾಳಿ ನಡೆಸಿದಾಗ ಕೋಟಿ ಕೋಟಿ ಹಣ, ವಿದೇಶಿ ಕರೆನ್ಸಿ, ಚಿನ್ನಾಭರಣ, ಕಾರ್ಡ್‌ಗಳು ಎಲ್ಲಾ ಪತ್ತೆಯಾಗಿದ್ದವು. ಈ ಕಾರಣಕ್ಕೆ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.





