ಬೆಂಗಳೂರು: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂ ಶಕ್ತಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ.
ಬೇಗೂರು ಗ್ರಾಮದ ಬಿಂದು, ರಂಗಮ್ಮ ಎಂಬುವವರು ಗಂಭೀರ ಗಾಯಗೊಂಡಿದ್ದು, ಸದ್ಯ ಅವರಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಶಾಸಕ ವಿರೇಂದ್ರ, ಚಾಲಕ ಸೇರಿ ಮೂವರು ಕಾರಿನಲ್ಲಿದ್ದರು ಎನ್ನಲಾಗಿದೆ.
ಶಾಸಕರ ಕಾರು ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…