ರಾಜ್ಯ

ಕಾಂಗ್ರೆಸ್‌ ಪಕ್ಷ ಇಂದು ನೆಲಕಚ್ಚಿದೆ: ಬಿಜೆಪಿ ಟ್ವೀಟ್‌

ಬೆಂಗಳೂರು: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು ದೂರದೆ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಇಂಡಿ ಮೈತ್ರಿಕೂಟದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಕಾಂಗ್ರೆಸ್‌ಗೆ ನೇರವಾಗಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಎಕ್ಸ್‌ ಖಾತೆಯಲ್ಲಿ ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ ಇಂಡಿಯಾ ಪಕ್ಷ ಸೋಲು ಬಂದಾಗಲೆಲ್ಲ ಫಲಿತಾಂಶ ಒಪ್ಪಿಕೊಂಡ ನಿದರ್ಶನವೇ ಇಲ್ಲ. ಮೊದಲು ಬ್ಯಾಲೆಟ್ ಪೇಪರ್ ಇರುವಾಗಲೂ ಅಳುತ್ತಿದ್ದರು, ಈಗ ಇವಿಎಂ ಇರುವಾಗಲೂ ಸೋತಾಗ ಅಳುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಇವಿಎಂ ಸುರಕ್ಷಿತ, ವಿಶ್ವಾಸಾರ್ಹ ಎಂದು ಸುಪ್ರೀಂ ಕೋರ್ಟ್‌‌ನಲ್ಲೂ ಸಾಬೀತಾಗಿದೆ. ನಕಲಿ ಗಾಂಧಿ ಕುಟುಂಬ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಹೊಣೆಯಿಂದ ನುಣುಚಿಕೊಳ್ಳುವುದರಿಂದ ಕಾಂಗ್ರೆಸ್ ಪಕ್ಷ ಇಂದು ನೆಲಕಚ್ಚಿದೆ ಎಂದು ವ್ಯಂಗ್ಯವಾಡಿದೆ.

 

 

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

14 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

14 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

16 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

17 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

18 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

21 hours ago