ರಾಜ್ಯ

2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ: ಎಚ್‌ಡಿಕೆಗೆ ಟಾಂಗ್‌ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದಾರೆ.

ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದ್ದು, ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಯಾವುದೇ ಕಾರಣಕ್ಕೂ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸೋದು ಬೇಡ ಎಂದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಆಗ್ರಹಿಸಿವೆ. ಆದರೂ ಯಾವುದಕ್ಕೂ ಜಗ್ಗದ ಆಡಳಿತ ಪಕ್ಷ ಕಾಂಗ್ರೆಸ್‌, ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಅನುಮೋದಿಸಿದೆ.

ಈ ನಡುವೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, 2028ಕ್ಕೆ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಬರೆದಿಟ್ಟುಕೊಳ್ಳಿ ಎಂದು ಟಾಂಗ್‌ ನೀಡಿದರು.

ಎಚ್‌ಡಿಕೆ ನನ್ನ ಸರ್ವನಾಶ ಬಯಸುತ್ತಿದ್ದಾರೆ. ಕುಮಾರಸ್ವಾಮಿಗೆ ವಿಚಾರದ ಅರಿವಿದೆ. ರಾಮನಗರ ಎಲ್ಲೂ ಹೋಗಲ್ಲ ಅಲ್ಲೇ ಇರುತ್ತದೆ. ರಾಮನಗರಕ್ಕೆ ಬಂದು ಅಕ್ರಮಕ್ಕೆ ಪ್ರಯತ್ನ ಮಾಡಲು ಯತ್ನಿಸಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಎಲ್ಲರೂ ನಮ್ಮವೇ. ಮುಂದಿನ ಪೀಳಿಗೆಗಾಗಿ ಈ ಹೆಸರು ಇಡಲಾಗಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

2 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

2 hours ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

2 hours ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

2 hours ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

2 hours ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

3 hours ago