Mysore
21
overcast clouds

Social Media

ಬುಧವಾರ, 24 ಜೂನ್ 2026
Light
Dark

ನಾಳೆ ನಿಗದಿಯಾಗಿದ್ದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.‌8ಕ್ಕೆ ಮುಂದೂಡಿಕೆ

rahulgandhi

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ.

ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್‌ ನಾಯಕರು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್.‌8ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಾಳೆ ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.

Tags:
error: Content is protected !!