ರಾಜ್ಯ

ಕೈ ಪಡೆಯಿಂದ ರಾಜಭವನ ಚಲೋ: ರಾಜ್ಯಪಾಲರ ವಿರುದ್ಧ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿಂದು (ಆ.31) ಪ್ರತಿಭಟನೆ ನಡೆಯಿತು.

ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನದ ಕಡೆಗೆ ಕಾಲ್ನಡಿಗೆಯಲ್ಲಿ ತೆರಳಿದ ಕೈಪಡೆ, ದಾರಿಯುದ್ದಕ್ಕೂ ರಾಜ್ಯಪಾಲರ ತಾರತಮ್ಯ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ, ಮೈತ್ರಿ ಪಕ್ಷಗಳ ನಾಯಕ ಅಕ್ರಮ ಹಗರಣಗಳ ತನಿಖೆ ನಡೆಸುವಂತೆ ಪ್ರತಿಭಟನೆ ನಡೆಸಿದರು. ಇದರಲ್ಲಿ ಸಿಎಂ ಡಿಸಿಎಂ ಸೇರಿದಂತೆ ಹಲವು ಕಾಂಗ್ರೆಸ್‌ನ ಪ್ರಬಲ ನಾಯಕರು ಭಾಗಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago