Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ಬಿಜೆಪಿ-ಜೆಡಿಎಸ್‌ ಪಿತೂರಿ ವಿರುದ್ಧ ಹೋರಾಡಲು ಕಾಂಗ್ರೆಸ್‌ ತೀರ್ಮಾನ: ಕೆ.ಸಿ ವೇಣುಗೋಪಾಲ್‌

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಪಕ್ಷಗಳು ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್‌ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ‌ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಾವು ಜನರ ಬಳಿ ಹೋಗಿ ವಾಸ್ತವಾಂಶ ವಿವರಿಸುತ್ತೇವೆ ಎಂದಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಮಾತನಾಡುವುದು ಜೋಕ್‌ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಎಷ್ಟು ಪ್ರಕರಣಗಳಿಲ್ಲ? ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಪ್ರಕರಣಗಳಿಲ್ಲ? ಇದೆಲ್ಲಾ ಬಿಟ್ಟು ಸಿದ್ದರಾಮಯ್ಯ ವಿರುದ್ದ ಎಲ್ಲರೂ ಹುನ್ನಾರ ನಡೆಸಿ, ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ, ನಾವು ಭಯ ಪಡುತ್ತಿಲ್ಲ, ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ ಎಂದು ಹೇಳಿದರು.

ಇದೇ ಬಿಜೆಪಿಯ ಹುನ್ನಾರದಿಂದಲೇ ದಳ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಬಿದ್ದಿದ್ದು, ಇದೀಗ ಇದೇ ಮಾದರಿಯಲ್ಲಿ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಟಾರ್ಗೆಟ್‌ ಮಾಡಿದ್ದಾರೆ. ಅವರವರ ಮಕ್ಕಳನ್ನು ರಕ್ಷಣೆ ಮಾಡಿಕೊಳ್ಳು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಪ್ರಜ್ವಲ್‌ ಪ್ರಕರಣದಲ್ಲಿ ಕಾಂಗ್ರೆಸ್‌ ವಿರುದ್ಧ ಹುನ್ನಾರ ಆಗಿದ್ದನ್ನು ನೀವು ಗಮನಿಸಬಹುದು ಎಂದರು.

ಎಲ್ಲರಿಗೂ ಸಿಎಂ ಸಿದ್ದರಾಮಯ್ಯನವರ ಪ್ರಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಗ್ಯಾರಂಟಿಯನ್ನು ಜಾರಿಗೊಳಿಸಿ ಬಡವರಿಗೆ ನೆರವಾದವು. ಇದು ಬಿಜೆಪಿ-ಜೆಡಿಎಸ್‌ಗೆ ಹಿನ್ನಡೆ ಆಗಬಹುದು ಎಂದು ಷಡ್ಯಂತ್ರ ಮಾಡಿ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಹೀಗೆ ಪ್ರಯತ್ನಿಸಲಾಗುತ್ತಿದೆ ಎಂದು ಕಿಡಿಕಾರಿದರು.

 

Tags:
error: Content is protected !!