ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣವಾಗಿ ಸ್ಥಗಿತಗೊಂಡಿದೆ: ಬೊಮ್ಮಾಯಿ

ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್‌ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದ್ದಾರೆ.

ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆಡಳಿತ ನಿಂತುಹೋಗಿದೆ. ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದು ಅವರವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದಷ್ಟೆ ಮುಖ್ಯ. ಆಡಳಿತ ವಿಫಲ ಮುಚ್ಚಿಹಾಕಲು, ವಿರೋಧ ಪಕ್ಷಗಳ ಆರೋಪಗಳನ್ನು ನಿಭಾಯಿಸಲು ಸಿಎಂ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಉತ್ತಮ ಆಡಳಿತ ನೀಡಿ ಎಂದು ರಾಜ್ಯದ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಈವರೆಗೆ ಬರಗಾಲ, ಪ್ರವಾಹ ಸೇರಿದಂತೆ ಯಾವುದೇ ಪರಿಹಾರ ಈವರೆಗೂ ನೀಡಲಾಗಿಲ್ಲ. ಜನರ ಕಷ್ಟಗಳಿಗೆ ಈವರೆಗೆ ಸ್ಪಂದಿಸದ ಸರ್ಕಾರ, ವಿಡಿಯೋ ಕಾಲ್‌ ಬಿಟ್ಟರೇ ಈವರೆಗೆ ಏನನ್ನು ಮಾಡಿಲ್ಲ ಎಂದು ದೂರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

2 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

2 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

2 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

2 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

3 hours ago