ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿಂದು ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಶ್ವ ಪರಂಪರೆ ವಿಜಯನಗರದ ಹೆಬ್ಬಾಗಿಲು ಎನಿಸಿಕೊಂಡಿರುವ ಹೊಸಪೇಟೆಯಲ್ಲಿ ಇಂದು ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶ ನಡೆಯಿತು.
ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.
ಸಮಾವೇಶದಲ್ಲಿ 1,11,111 ಭೂ ರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಜೊತೆಗೆ ಕಂದಾಯ ಇಲಾಖೆಯ ಮಹತ್ವದ ಯೋಜನೆಗಳನ್ನು ಸಮಾವೇಶದ ಮೂಲಕ ಸಾಕಾರಗೊಳಿಸಲಾಯಿತು.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…