ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಡಿಕೆಶಿ ಅವರು, ಅನೇಕ ಜನರು ನನಗೆ ಮೇಲ್ ಹಾಗೂ ಮೆಸೇಜ್ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಶಕ್ತಿ ಯೋಜನೆ ರದ್ದು ಮಾಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ನಾವು ಕೂಡ ಟಿಕೆಟ್‌ಗೆ ಹಣ ಕೊಡಲು ಸಿದ್ಧವಿದ್ದೇವೆ. ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನೇಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಈ ಬೆಳವಣಿಗೆಗಳು ಆದ ಮೇಲೆ ನಾವೆಲ್ಲಾ ಕೂತು ಸುದೀರ್ಘ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.





