ರಾಜ್ಯ

ಶಕ್ತಿ ಯೋಜನೆ ಪರಿಷ್ಕರಣೆ ಪಕ್ಕಾ? ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ  ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್‌ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಡಿಕೆಶಿ ಅವರು, ಅನೇಕ ಜನರು ನನಗೆ ಮೇಲ್‌ ಹಾಗೂ ಮೆಸೇಜ್‌ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಶಕ್ತಿ ಯೋಜನೆ ರದ್ದು ಮಾಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ನಾವು ಕೂಡ ಟಿಕೆಟ್‌ಗೆ ಹಣ ಕೊಡಲು ಸಿದ್ಧವಿದ್ದೇವೆ. ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನೇಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಈ ಬೆಳವಣಿಗೆಗಳು ಆದ ಮೇಲೆ ನಾವೆಲ್ಲಾ ಕೂತು ಸುದೀರ್ಘ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರ್ಕಾರ ಆದೇಶ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…

14 mins ago

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…

51 mins ago

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

1 hour ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

1 hour ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

2 hours ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

3 hours ago