Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಸ್ತ್ರೀ ಕುಲ ಪೀಡಕರ ರಕ್ಷಣೆಗೆ ನಿಂತಿದೆ: ಬಿವೈವಿ ಆರೋಪ

ಬೆಂಗಳೂರು: ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್‌ ಖಾತೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ.

ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.

ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.

Tags:
error: Content is protected !!