ಬೆಂಗಳೂರು: ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್ ಖಾತೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ.
ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.
ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…