ರಾಜ್ಯ

ED ದಾಳಿ : ಪರಮೇಶ್ವರ್ ಬೆನ್ನಿಗೆ ನಿಂತ ʻಕೈʼ ಪಡೆ

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ ಚಿಕಿತ್ಸೆ ಪಡೆದು ಕೈಗೆ ಸ್ಟ್ರಿಪ್ಸ್ ಅಂಟಿಸಿಕೊಂಡೇ ಪರಮೇಶ್ವರ್ ಮನೆಗೆ ಆಗಮಿಸಿದರು. ಸುದೀರ್ಘ ಕಾಲ ಚರ್ಚೆ ನಡೆಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಗೃಹಸಚಿವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ‌

ಸಚಿವ ಪರಮೇಶ್ವರ್ ಅವರ ಜೊತೆ ಎಚ್.ಸಿ.ಮಹದೇವಪ್ಪ, ದಿನೇಶ್‍ಗುಂಡೂರಾವ್, ಸತೀಶ್ ಜಾರಕಿಹೊಳಿಯವರು ಒಂದೇ ಕಾರಿನಲ್ಲಿ ಮನೆಯಿಂದ ಹೊರಹೋಗಿದ್ದುದು ವಿಶೇಷವಾಗಿತ್ತು.
ನಾಲ್ಕು ಮಂದಿ ಸಚಿವರು ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದರು. ಅಲ್ಲಿ ನೂತನ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಅಭಿನಂದನೆ ಬಳಿಕ ಮುಖ್ಯಮಂತ್ರಿಯವರು ಸಚಿವರ ಜೊತೆ ಪ್ರತ್ಯೇಕ ಚರ್ಚೆ ನಡೆಸಿದರು.
‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago