Mysore
19
clear sky

Social Media

ಬುಧವಾರ, 28 ಜನವರಿ 2026
Light
Dark

ಸುಳ್ಳು ಭರವಸೆ ನೀಡಿ ಜನರಿಗೆ ವಂಚನೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ: ಎಚ್‌.ಡಿ ದೇವೇಗೌಡ

ಹಾಸನ: ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌, ಕೇಂದ್ರ ಸರ್ಕಾರದ ಅಧಿಕಾರ ಹಿಡಿಯಲು ಸಾಧ್ಯವೇ ಎಂದು ಜೆಡಿಎಸ್‌ ವರಿಷ್ಶ ಹೆಚ್.ಡಿ ದೇವೇಗೌಡ ಪ್ರಶ್ನಿಸಿದರು.

ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಾಗರಹಳ್ಳಿ ಗ್ರಾಮಾದಲ್ಲಿ ಶನಿವಾರ (ಏ.೬) ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಈವರೆಗೆ ಲೋಕಸಭೆಯಲ್ಲಿ ಅಧಿಕೃತವಾಗಿ ಪ್ರತಿಪಕ್ಷದ ಸ್ಥಾನ ಕೂಡ ಸಿಕ್ಕಿಲ್ಲ. ಇಲ್ಲಸಲ್ಲದ ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ವಂಚನೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿ ಘೋಷಿಸಿದೆ. ತಮ್ಮ ಸರ್ಕಾರ ಬಂದರೆ ದೇಶದಲ್ಲಿ 8 ಕೋಟಿ ಮನೆಗಳನ್ನು ನಿರ್ಮಾಣ ಮಾಡಿ, ಎಲ್ಲ ರೀತಿಯ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಇವರ ಈ ಎಲ್ಲ ಭರವಸೆಗಳನ್ನು ಈಡೇರಿಸಲು ಹಣ ಎಲ್ಲಿದೆ? ಇಂತಹ ಸುಳ್ಳು ಭರವಸೆಗಳನ್ನು ಜನ ನಂಬಬಾರದು ಎಂದರು.

ಶುಕ್ರವಾರ ಬಾಬು ಜಗಜೀವನ್‌ರಾಂ ಜಯಂತಿಯಲ್ಲಿ ಕಾಂಗ್ರೆಸ್‌ನ ಯಾವೊಬ್ಬ ನಾಯಕನು ಜಗಜೀವನ್‌ರಾಂ ಬಗ್ಗೆ ಒಂದು ಮಾತನಾಡಿಲ್ಲ. ಇಂದಿರಗಾಂಧಿ, ನೆಹರು ಕಾಲದಲ್ಲಿ ಸಚಿವರಾಗಿದ್ದವರಿಗೆ ಸಲ್ಲಿಸುವ ಗೌರವ ಇದೇನಾ ಎಂದು ಪ್ರಶ್ನಿಸಿದರು.

Tags:
error: Content is protected !!