ಹಾಸನ: ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಅಧಿಕಾರ ಹಿಡಿಯಲು ಸಾಧ್ಯವೇ ಎಂದು ಜೆಡಿಎಸ್ ವರಿಷ್ಶ ಹೆಚ್.ಡಿ ದೇವೇಗೌಡ ಪ್ರಶ್ನಿಸಿದರು.
ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಾಗರಹಳ್ಳಿ ಗ್ರಾಮಾದಲ್ಲಿ ಶನಿವಾರ (ಏ.೬) ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಈವರೆಗೆ ಲೋಕಸಭೆಯಲ್ಲಿ ಅಧಿಕೃತವಾಗಿ ಪ್ರತಿಪಕ್ಷದ ಸ್ಥಾನ ಕೂಡ ಸಿಕ್ಕಿಲ್ಲ. ಇಲ್ಲಸಲ್ಲದ ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ವಂಚನೆ ಮಾಡಲು ಕಾಂಗ್ರೆಸ್ ಮುಂದಾಗಿದೆ ಎಂದರು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿ ಘೋಷಿಸಿದೆ. ತಮ್ಮ ಸರ್ಕಾರ ಬಂದರೆ ದೇಶದಲ್ಲಿ 8 ಕೋಟಿ ಮನೆಗಳನ್ನು ನಿರ್ಮಾಣ ಮಾಡಿ, ಎಲ್ಲ ರೀತಿಯ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಇವರ ಈ ಎಲ್ಲ ಭರವಸೆಗಳನ್ನು ಈಡೇರಿಸಲು ಹಣ ಎಲ್ಲಿದೆ? ಇಂತಹ ಸುಳ್ಳು ಭರವಸೆಗಳನ್ನು ಜನ ನಂಬಬಾರದು ಎಂದರು.
ಶುಕ್ರವಾರ ಬಾಬು ಜಗಜೀವನ್‌ರಾಂ ಜಯಂತಿಯಲ್ಲಿ ಕಾಂಗ್ರೆಸ್‌ನ ಯಾವೊಬ್ಬ ನಾಯಕನು ಜಗಜೀವನ್‌ರಾಂ ಬಗ್ಗೆ ಒಂದು ಮಾತನಾಡಿಲ್ಲ. ಇಂದಿರಗಾಂಧಿ, ನೆಹರು ಕಾಲದಲ್ಲಿ ಸಚಿವರಾಗಿದ್ದವರಿಗೆ ಸಲ್ಲಿಸುವ ಗೌರವ ಇದೇನಾ ಎಂದು ಪ್ರಶ್ನಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…