ರಾಜ್ಯ

ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ: ಜೆಡಿಎಸ್‌ ನೇರ ಆರೋಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?

•ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!!
•ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್!!
•ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.
•ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.
•ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.
•ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

35 seconds ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

1 min ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

8 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

16 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

42 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

54 mins ago