ರಾಮನಗರ: 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ರಾಮನಗರದಲ್ಲಿಂದು ಮಾತನಾಡಿದ ಅವರು, ಮೊನ್ನೆ ಬಿಜೆಪಿ ನಾಯಕರು ಬಂದು ಭಾಷಣ ಮಾಡಿ ಹೋಗಿದ್ದಾರೆ. ಮುಂದೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಜೆಡಿಎಸ್‌ನವರ ಹೆಸರು ಹೇಳಲೂ ಇಷ್ಟಪಡುವುದಿಲ್ಲ. ಜೆಡಿಎಸ್‌ನ ಹಣೆಯಲ್ಲಿಯೂ ಬರೆದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮತ್ತೆ ಹುಟ್ಟಿ ಬಂದರೂ ತೆಗೆಯಲು ಸಾಧ್ಯವಿಲ್ಲ. ಮುಂದಿನ ಚುನಾವಣೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.





