ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ, ಲೋಕಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರ ಅವರು, ಕಳೆದ ೬೦ ವರ್ಷಗಳಿಂದ ರಾಜಕೀಯ ಮಾಡುತ್ತಾ ಬಂದಿರುವ ನನಗೇ ಇವರು ಹೇಳ್ತಾರೆ. ನಾನು ಜಾತ್ಯತೀತ ಆದರ್ಶಗಳಲ್ಲಿ ಸ್ವಲ್ಪವೂ ರಾಜಿ ಮಾಡಿಕೊಳ್ಳದೇ ದೇಶವನ್ನು ಆಳಿದ್ದೇನೆ. ಆದರೆ ನೀವು(ಇಂಡಿಯಾ ಬಣ) ದೇವೇಗೌಡರನ್ನು ಅವಮಾನಿಸಿದ್ದೀರಿ. ನಾನು ಇವತ್ತು ಹೇಳುತ್ತೇನೆ, ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣಲಿದೆ. ಸಿಎಂ ಸಿದ್ದರಾಮಯ್ಯ, ಡಿಕೆಶಿ ನೇತೃತ್ವದ ಕಾಂಗ್ರೆಸ್‌ನ್ನು ಕರ್ನಾಟಕದಲ್ಲಿ ನಾವು ಸೋಲಿಸಿಯೇ ತೀರುತ್ತೇವೆ ಎಂದು ಕಿಡಿಕಾರಿದರು.
ಲೋಕಸಭಾ ಚುನಾವಣೆಯಲ್ಲಿ ಸೀಟ್ ಹಂಚಿಕೆ ಸಂಬಂಧ ಮಾತನಾಡಿದ ದೇವೇಗೌಡರು, ಸೀಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಕಾಂಗ್ರೆಸ್‌ನ್ನು ಸೋಲಿಸಬೇಕು ಎಂದು ಹೇಳಿದರು.
ಪಂಚರಾಜ್ಯ ಚುನಾವಣೆ ನಡೆದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಎಷ್ಟು ಹಣ ಸಾಗಿಸಿದ್ದಾರೆ ಮತ್ತು ಎಷ್ಟು ಹಣ ಸೀಜ್ ಆಗಿದೆ ಎಂಬುದರ ಬಗ್ಗೆ ಚುನಾವಣಾ ಆಯೋಗ ಗಮನಹರಿಸಿದೆ ಎಂದರು.
ಇನ್ನೂ ಇದೇ ವೇಳೆ ಹಿಂದೂ ಕಾರ್ಯಕ್ರತರ ವಿರುದ್ಧ ರಾಜ್ಯ ಸರ್ಕಾರದ ಕ್ರಮಗಳ ಬಗೆಗಿನ ಪ್ರಶ್ನೆಗೆ, ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಇಡೀ ದೇಶಕ್ಕೆ ಬುದ್ದಿ ಹೇಳುತ್ತಾರೆ. ಆದರೆ, ಅಕ್ರಮ ತಡೆಯುವ ಶಕ್ತಿ ಇದೆಯಾ? ದೇಶದಲ್ಲಿ ಟಿಪ್ಪು ಸುಲ್ತಾನ್ ಬಿಟ್ಟರೇ ಬೇರೆ ವಿಚಾರವೇ ಇಲ್ಲವಾ. ಎನ್‌ಡಿಎ ಸೋಲಿಸಿ ೨೦ ಸ್ಥಾನಗಳನ್ನು ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್ ಕನಸು, ಕನಸಾಗಿಯೇ ಉಳಿಯಲಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…