ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.
ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಗಣೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, ಭಿನ್ನಾಭಿಪ್ರಾಯಕ್ಕೆ ಹತ್ಯೆ ಮಾಡಿರುವುದು ಖಂಡನೀಯ. ದತ್ತಜಯಂತಿ ಶಾಂತಿಯಿಂದ ನಡೆದ ಬಳಿಕವೂ ಹತ್ಯೆಯಾಗಿದೆ. ಕಾರ್ಯಕರ್ತನ ಹತ್ಯೆ ಜಿಲ್ಲೆಗೆ ಶೋಕ ತರುವ ಘಟನೆಯಾಗಿದೆ. ಈಗಾಗಲೇ ಐವರ ಬಂಧನವಾಗಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.





