Mysore
28
moderate rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ನನ್ನೆಲ್ಲಾ ಆತ್ಮೀಯ ಬಂಧುಗಳು ಪ್ರತಿಭಟನೆ ವೇಳೆ ಎಚ್ಚರಿಕೆ ವಹಿಸಿ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಈ ವೇಳೆ ಟೈರ್‌ಗೆ ಬೆಂಕಿ ಹಚ್ಚುವ ವೇಳೆ ದ್ಯಾಮಪ್ಪ ಎಂಬುವವರು ಗಾಯಗೊಂಡಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ವೇಳೆ ಗಾಯಗೊಂಡಿದ್ದಾರೆ. ಈ ವಿಷಯ ತಿಳಿದು ನನಗೆ ಬಹಳ ದುಃಖವಾಯಿತು. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ನನ್ನೆಲ್ಲಾ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ಎಚ್ಚರಿಕೆಯಿಂದ ಇರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಬರೆದುಕೊಂಡಿದ್ದಾರೆ.

 

Tags: