ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಟೈರ್‌ಗೆ ಬೆಂಕಿ ಹಚ್ಚುವ ವೇಳೆ ದ್ಯಾಮಪ್ಪ ಎಂಬುವವರು ಗಾಯಗೊಂಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ವೇಳೆ ಗಾಯಗೊಂಡಿದ್ದಾರೆ. ಈ ವಿಷಯ ತಿಳಿದು ನನಗೆ ಬಹಳ ದುಃಖವಾಯಿತು. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ನನ್ನೆಲ್ಲಾ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ಎಚ್ಚರಿಕೆಯಿಂದ ಇರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಬರೆದುಕೊಂಡಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…