Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಯಾರಾದರೂ ಹೊಗಳಲಿ, ತೆಗಳಲಿ ಅಥವಾ ಟೀಕಿಸಲಿ, ಇಲ್ಲವಾ ಬಿಡಲಿ, ಉಳಿದವರು ಗುರುತಿಸಲಿ, ಬಿಡಲಿ ನಾವು ಪ್ರತಿಯೊಬ್ಬರೂ ನಮ್ಮ ಆತ್ಮಾಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯಗಳು ಕೇವಲ ಭಾಷಣದಿಂದ ಈಡೇರುವುದಿಲ್ಲ. ಈ ಇಬ್ಬರ ಜೀವನದ ಮೌಲ್ಯ ಹಾಗೂ ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಹಾಗೂ ನಮ್ಮ ಸರ್ಕಾರ ಇವರಿಬ್ಬರ ದಿಕ್ಕಿನಲ್ಲಿ ಸಾಗುತ್ತವೆ ಎಂದು ಹೇಳಿದರು.

ಗಾಂಧೀಜಿ ಅವರ ಈ ಹೋರಾಟದಿಂದಲೇ ನಾವು ಇಂದು ಸ್ವಾತಂತ್ರ್ಯವಾದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಪ್ರಪಂಚದ ನಾಯಕ ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಜಯಂತಿ ಅಂಗವಾಗಿ ಶಾಸ್ತ್ರಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅತ್ಯಂತ ಪ್ರಾಮಾಣಿಕ ನಾಯಕ ಹಾಗೂ ರಾಜಕಾರಣಿ ಇವರೆಲ್ಲರ ಬದುಕಿನ ಸಂದೇಶಗಳನ್ನು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ದಾರಿಯಲ್ಲೇ ನಾವು ನಡೆಯಬೇಕು. ಹಾಗಿದ್ದರೆ ಮಾತ್ರ ನಾವು ನಮ್ಮ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, ಗಾಂಧಿ ಭವನ ಕಾರ್ಯದರ್ಶಿ ವಿಶುಕುಮಾರ್‌ ಹಾಗೂ ಎಲ್ಲರ ಗಾಂಧಿ ಕೃತಿಯ ಲೇಖಕ ನಟರಾಜ್‌ ಹುಳಿಯಾರ್‌ ಇನ್ನಿತರ ಸಾಧಕರು ಉಪಸ್ಥಿತರಿದ್ದರು.

Tags: