ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಯಾರಾದರೂ ಹೊಗಳಲಿ, ತೆಗಳಲಿ ಅಥವಾ ಟೀಕಿಸಲಿ, ಇಲ್ಲವಾ ಬಿಡಲಿ, ಉಳಿದವರು ಗುರುತಿಸಲಿ, ಬಿಡಲಿ ನಾವು ಪ್ರತಿಯೊಬ್ಬರೂ ನಮ್ಮ ಆತ್ಮಾಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳು ಕೇವಲ ಭಾಷಣದಿಂದ ಈಡೇರುವುದಿಲ್ಲ. ಈ ಇಬ್ಬರ ಜೀವನದ ಮೌಲ್ಯ ಹಾಗೂ ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಹಾಗೂ ನಮ್ಮ ಸರ್ಕಾರ ಇವರಿಬ್ಬರ ದಿಕ್ಕಿನಲ್ಲಿ ಸಾಗುತ್ತವೆ ಎಂದು ಹೇಳಿದರು.
ಗಾಂಧೀಜಿ ಅವರ ಈ ಹೋರಾಟದಿಂದಲೇ ನಾವು ಇಂದು ಸ್ವಾತಂತ್ರ್ಯವಾದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಪ್ರಪಂಚದ ನಾಯಕ ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಶಾಸ್ತ್ರಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅತ್ಯಂತ ಪ್ರಾಮಾಣಿಕ ನಾಯಕ ಹಾಗೂ ರಾಜಕಾರಣಿ ಇವರೆಲ್ಲರ ಬದುಕಿನ ಸಂದೇಶಗಳನ್ನು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ದಾರಿಯಲ್ಲೇ ನಾವು ನಡೆಯಬೇಕು. ಹಾಗಿದ್ದರೆ ಮಾತ್ರ ನಾವು ನಮ್ಮ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು.
ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಗಾಂಧಿ ಭವನ ಕಾರ್ಯದರ್ಶಿ ವಿಶುಕುಮಾರ್ ಹಾಗೂ ಎಲ್ಲರ ಗಾಂಧಿ ಕೃತಿಯ ಲೇಖಕ ನಟರಾಜ್ ಹುಳಿಯಾರ್ ಇನ್ನಿತರ ಸಾಧಕರು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…