ರಾಜ್ಯ

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭೆ ಟಿಕೆಟ್‌ನ್ನು ಹೆಚ್‌.ವೈ.ಮೇಟಿ ಅವರ 2ನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್‌ನ್ನು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ ಎಂದರು.

ನಾನು ಸೇರಿದಂತೆ ಸಿಎಂ ಹಾಗೂ ಜಮೀರ್ ಅಹಮದ್, ನಾಸಿರ್‌ ಹುಸೇನ್, ಸಲೀಂ ಅಹ್ಮದ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜೊತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಶಾಮನೂರು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಗ್ಗಟ್ಟಿನಿಂದ ಉಪ ಚುನಾವಣೆ ಮಾಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರ ನಿಗಧಿ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅಂತ ಮಾಹಿತಿ ನೀಡಿದರು.

ದಾವಣಗೆರೆ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಸಮಾಧಾನಗೊಂಡಿದ್ದಾರೆಯೇ ಎಂದು ಕೇಳಿದಾಗ, ಅವರುಗಳು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಜನಸಂಖ್ಯೆ ಆಧಾರದ ಮೇಲೆ ಕೇಳುತ್ತಿದ್ದಾರೆ. ಅವರದ್ದು ತಪ್ಪಿಲ್ಲ. ದಿನಾಂಕ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಕೆ ಮಾಡಿರುವುದಾಗಿ ಮಲ್ಲಿಕಾರ್ಜುನ್ ಅವರು ಹೇಳಿದರು. ನಮಗೂ ನಂಬಿಕೆ ಇದ್ದಂತೆ ಅವರಿಗೂ ಇದೆ. ಪಕ್ಷ ಹೇಳಿದರೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ‌.

ಬಿಜೆಪಿ ಜೆಡಿಎಸ್ ಅವರು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಕೇಳಿದಾಗ, ಗೊತ್ತು, ಈ ಎಲ್ಲಾ ಪ್ರಯತ್ನ ನಡೆಯುತ್ತಾ ಇದೆ. ರಾಜಕಾರಣ ಅಂದ ಮೇಲೆ ಅವರು ಡಿಫರೆನ್ಸ್ ಉಂಟು ಮಾಡುತ್ತಾರೆ, ನಾವೂ ಮಾಡುತ್ತೇವೆ. ಅವರಲ್ಲಿ ಒಮ್ಮತ ಇದೆಯೇ? ಇಬ್ಬರು ಗಲಾಟೆ ಮಾಡಿದ್ದಕ್ಕೆ ಮೂರನೆಯವರಿಗೆ ನೀಡಿದ್ದಾರೆ. ನಾನು ಏಕೆ ಅದನ್ನು ಚರ್ಚೆ ಮಾಡಲು ಹೋಗಲಿ. ಅದು ಅವರ ಪಕ್ಷದ ತೀರ್ಮಾನ ಇದು ನಮ್ಮ ಪಕ್ಷದ ತೀರ್ಮಾನ ಎಂದು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

13 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

13 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

13 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

14 hours ago