ರಾಜ್ಯ

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿತ್ತು. ಈ ನೀತಿಯು ಮಾತೃಭಾಷೆ/ಕನ್ನಡಕ್ಕೆ ಆದ್ಯತೆ ನೀಡುತ್ತಿದ್ದು, ಹಿಂದಿ ಭಾಷೆಯ ಕಡ್ಡಾಯ ಕಲಿಕೆಯನ್ನು ಕೈಬಿಡುವ ಗುರಿ ಹೊಂದಿತ್ತು.

ಕನ್ನಡ ಪದ ಸಂಘಟನೆಗಳ ಮನವಿ ಏನು?
ಕರವೇ ಶಿವರಾಮೇಗೌಡ, ಸಾರಾ ಗೋವಿಂದ್ ನೇತೃತ್ವದಲ್ಲಿ ಇಂದು(ಮಾರ್ಚ್.‌27) ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಮಧು ಬಂಗಾರಪ್ಪ ಅವರನ್ನ ಭೇಟಿಯಾದ ಕನ್ನಡ ಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಮನವಿ ಮಾಡಿವೆ. ಶಿಕ್ಷಣದಲ್ಲಿ ತ್ರಿಭಾಷ ಸೂತ್ರ ರದ್ದು ಮಾಡಿ, ದ್ವಿಭಾಷಾ ಸೂತ್ರ ಜಾರಿ ಮಾಡುವಂತೆ ಮನವಿ ಮಾಡಿವೆ.

ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಕನ್ನಡ ಪರ ಸಂಘಟನೆಗಳ ಮನವಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂದಿ ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

56 mins ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

1 hour ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

2 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

2 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

3 hours ago