Mysore
23
haze

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮಾಜಿ ಯೋಧರಿಗೆ ಪ್ರತ್ಯೇಕ ನಿಗಮಕ್ಕೆ ಚಿಂತನೆ : ಡಿಸಿಎಂ ಡಿಕೆ ಶಿವಕುಮಾರ್‌

D K Shivakumar

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಪುರಭವನದಲ್ಲಿಂದು ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತರಾದ ಯೋಧರ ಕುಟುಂಬ ಸದಸ್ಯರನ್ನು ಸನಾನಿಸಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

ಇಂತಹ ಅತ್ಯಂತ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ನಿಮೆಲ್ಲರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ. ನಿಮ್ಮ ಕೊಡುಗೆಯನ್ನು ಸದಾ ಸ್ಮರಿಸಲಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದರು.

ಹಿರಿಯ ಸೇನಾಧಿಕಾರಿಗಳು, ಹುತಾತ್ಮಾ ಯೋಧರ ಕುಟುಂಬಕ್ಕೆ ಸನ್ಮಾನ : ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಸೇನಾಧಿಕರಿಗಳು ಹಾಗೂ ಮಾಜಿ ಯೋಧರಿಗೆ ಸರಣಿಕೆ ನೀಡಿ ಗೌರವಿಸಲಾಯಿತು. ಇನ್ನು ದೇಶ ಸೇವೆಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬ ಸದಸ್ಯರಿಗೆ ಸನಾನ ಸಲ್ಲಿಸಿದರು.

ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೋಜನ್ ಥಾಮಸ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಎಂ.ಸಿ.ಮುತ್ತಣ್ಣ, ಮೇಜರ್ ಗಣೇಶ್ ಮದ್ದಪ್ಪ, ಕ್ಯಾಪ್ಟನ್ ಎಂ.ವಿ.ಪಂಜಲ್, ಮೇಜರ್ ಮೋಹನ್ ಗಂಗಾಧರನ್, ಮೇಜರ್ ಶಫೀಕ್ ಮೊಹಮದ್ ಖಾನ್, ಸೇನಾ ಪದಕ ಪುರಸ್ಕೃತ ಕರ್ನಲ್ ರಾಮಮೂರ್ತಿ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು ಈ ಜೈ ಹಿಂದ್ ಸಭಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಸೇನೆಯ ಹಿರಿಯ ಅಧಿಕಾರಿಗಳು, ಮಾಜಿ ಯೋಧರು ಭಾಗವಹಿಸಿದ್ದರು. ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಭಾರತೀಯ ಯೋಧರಿಗೆ ನಮನ ಸಲ್ಲಿಸಬೇಕು, ಅವರ ಬೆನ್ನಿಗೆ ನಿಲ್ಲಬೇಕು ಎಂಬ ಉದ್ದೇಶದಿಂದ ಎಐಸಿಸಿಯು ದೇಶದಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ನಿರ್ದೇಶನ ನೀಡಿದೆ.

Tags:
error: Content is protected !!