ರಾಜ್ಯ

ಕ್ಷೇತ್ರ ಪುನರ್‌ ವಿಂಗಡಣೆ; ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ: ಸಿಎಂ

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಆದಾಗ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಅಮಿತ್‌ ಶಾ ಅವರ ಹೇಳಿಕೆ ನಂಬಲು ಅರ್ಹವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ ವಿಂಗಡಣೆಗೆ ಅತ್ಯುತ್ಸಾಹ ತೋರಿಸುತ್ತಿದ್ದು, ಮರು ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುವುದು ಕಟ್ಟಿಟ್ಟಬುತ್ತಿ ಎನ್ನುವುದು ನಮಗೆ ಅರ್ಥವಾಗಿದೆ ಎಂದರು.

ಮರುವಿಂಗಡಣೆಯನ್ನು ಜನಸಂಖ್ಯೆ ಆಧಾರದ ಮೇಲೆ ಮಾಡಲಾಗುವುದೋ ಅಥವಾ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ ಎಂಬ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದರು.

ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟಬುತ್ತಿ. ಇತ್ತೀಚಿನ ಜನಗಣತಿ ಮಾತ್ರ ಆಧರಿಸಿ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 28ಕ್ಕೆ ಇಳಿಯುವ ಸಾಧ್ಯತೆ ಇದೆ. ಇದೇ ರೀತಿ ಆಂಧ್ರ ಪ್ರದೇಶದಲ್ಲಿ 42 ರಿಂದ 34, ಕೇರಳದಲ್ಲಿ 20 ರಿಂದ 12, ತಮಿಳುನಾಡಿನಲ್ಲಿ 39ರಿಂದ 31 ಕ್ಕೆ ಇಳಿಯಲಿದೆ.

ಹಾಗೆಯೇ ಉತ್ತರಪ್ರದೇಶದಲ್ಲಿ 80ರಿಂದ 91, ಬಿಹಾರದಲ್ಲಿ 40ರಿಂದ 50, ಮಧ್ಯಪ್ರದೇಶದಲ್ಲಿ 29ರಿಂದ 33ಕ್ಕೆ ಏರಿಕೆಯಾಗಿಲಿದೆ. ಇದನ್ನು ಅನ್ಯಾಯ ಎನ್ನದೇ ನ್ಯಾಯ ಎನ್ನಲು ಸಾಧ್ಯವೇ  ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ, ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಉತ್ಸಾಹ ನೋಡಿದರೆ ದಕ್ಷಿಣ ರಾಜ್ಯಗಳನ್ನು ಹತ್ತಿಕ್ಕುವ ದುರುದ್ದೇಶ ಕಾಣಿಸುತ್ತಿದೆ. ಈ ವಿಚಾರವಾಗಿ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಬಿಜೆಪಿಯ 17 ಸದಸ್ಯರು ಹಾಗೂ ಜೆಡಿಎಸ್‌ನ 2 ಸದಸ್ಯರು ಮಾತನಾಡದೇ ಜೀತದಾಳುಗಳಂತೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಎಂದು ಕಿಡಿಕಾರಿದರು.

ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

8 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

8 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

8 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

9 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

11 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

12 hours ago