ರಾಜ್ಯ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದೆ : ಹೆಚ್‌.ಡಿ.ದೇವೇಗೌಡ

  • ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು.
  • ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ.
  • ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ.

ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು,  ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲಾ ಅಂತಿಮ ಆಗುತ್ತದೆ ಎಂದರು.

ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್ ಪಕ್ಷಕ್ಕೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದರು.

ಬಿಜೆಪಿ ಟಿಕೆಟ್ ವಿಚಾರವಾಗಿ ಕೆಲವು ಕ್ಷೇತ್ರಗಳ ಅಭಿಪ್ರಾಯ ಕೇಳಬಹುದು. ಆಗ ಅಭಿಪ್ರಾಯವನ್ನು ಹೇಳುತ್ತೇವೆ. ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.

ಚುನಾವಣೆ ಅಧಿಸೂಚನೆ ಆದ ಬಳಿಕ ರಾಜ್ಯದಲ್ಲಿ ನನ್ನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುವುದು. ಮೋದಿ ಅವರದ್ದು ಬಹಳ ಸ್ಪೀಡ್ ಇದೆ, 10 ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅವರು ಪ್ರವಾಸ ಮಾಡುತ್ತಿದ್ದಾರೆ. ಆದರೆ, ನಾನು ಎಲ್ಲಿಗೆ ಕರೆದರೆ ಅಲ್ಲಿಗೆ ಹೋಗುತ್ತೇನೆ. ಯಾವ ಜಿಲ್ಲೆಗೆ ಕರೆದರೂ ಹೋಗುತ್ತೇನೆ. ಕುಮಾರಸ್ವಾಮಿ ಅವರು ಸೇರಿದಂತೆ ಜೆಡಿಎಸ್ ನಾಯಕರು ಎಲ್ಲರೂ ಪ್ರವಾಸ ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಾಧ್ಯಮಗಳಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದ ಅನಗತ್ಯವಾಗಿ ಚರ್ಚೆ ಆಗುತ್ತಿದೆ ಎಂದ ಮಾಜಿ ಪ್ರಧಾನಿಗಳು; ಆ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ಸಂಘಟನೆ ಚೆನ್ನಾಗಿದೆ. ಆದಷ್ಟು ಬೇಗ ಮಂಡ್ಯದಲ್ಲಿ ಸಮಾವೇಶ ನಡೆಸಲಾಗುವುದು. ನನಗೆ ವಯಸ್ಸಾಗಿದ್ದರೂ ನಾನೇನು ಸುಮ್ಮನೆ ಕೂರಲ್ಲ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ಹೆಚ್.ಡಿ.ಕುಮಾರಸ್ವಾಮಿ ಅವರು, ಮೋದಿ ಮತ್ತು ಅಮಿತ್ ಶಾ ಅವರುಗಳು ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ನಡೆಯಬಹುದು ಎಂದರು.

ಒಂದಿಷ್ಟು ಜನ ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಹಾಗೆ ಹೇಳಿಕೆ ಕೊಡಲು ಅವರು ಸ್ವತಂತ್ರರು ಎಂದು ಮತ್ತೊಂದು ಪ್ರಶ್ನೆಗೆ ಮಾಜಿ ಪ್ರಧಾನಿಗಳು ಮಾರ್ಮಿಕವಾಗಿ ಉತ್ತರಿಸಿದರು.

ಬೆಂಗಳೂರು ಸ್ಪೋಟ ಪ್ರಕರಣ: ಬೆಂಗಳೂರಿನಲ್ಲಿ ಸ್ಪೋಟ ಸಂಭವಿಸಿದ ಪ್ರಕರಣವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಅವರಿಬ್ಬರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸರಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಅನಿಸುತ್ತಿದೆ ಎಂದರು ಮಾಜಿ ಪ್ರಧಾನಿಗಳು.

andolana

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

8 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

9 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

9 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

9 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

10 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

10 hours ago