ರಾಜ್ಯ

ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಲ್ಲಿ ಅತೀ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.

ಬಜೆಟ್ ಗಾತ್ರ ಹೆಚ್ಚಾದಂತೆ scp/ tsp ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂಪಯಿಯನ್ನು ನಾವು ತೆಗೆದಿಟ್ಟಿದ್ದೀವಿ ಎಂದು ಹೇಳಿದರು.

8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದರು.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದು ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago