ಬೆಂಗಳೂರು: ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿತ್ತು. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. 63 ವರ್ಷದ ಆನೆ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು.
ಆದರೇ ಸಿಎಂ ಸಿದ್ಧರಾಮಯ್ಯ, ವಿಶ್ವವಿಖ್ಯಾತ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಸ್ಥಳ ಹಾಗೂ ಹೆಚ್.ಡಿ ಕೋಟೆಯಲ್ಲೂ ಸ್ಮಾರಕ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಅರ್ಜುನ ಪ್ರಾಣಬಿಟ್ಟಿದ್ದ ಸಕಲೇಶಪುರದ ಅರಣ್ಯದಲ್ಲಿಯೇ ಸ್ಮಾರಕ ನಿರ್ಮಿಸಲು ಹೇಳಿದ್ದು, ಮೈಸೂರಿನ ಎಚ್.ಡಿ. ಕೋಟೆಯಲ್ಲಿಯೂ ಸ್ಮಾರಕ ನಿರ್ಮಿಸಲು ನಿರ್ದೇಶನ ನೀಡಿದ್ದೇವೆ’ ಎಂದು ಸಿಎಂ ತಿಳಿಸಿದ್ದಾರೆ.
ಮೈಸೂರು ದಸರಾ ಉತ್ಸವದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಸರು ಬಳಿಯ ಅರಣ್ಯದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ಸಿಲುಕಿ ಮೃತಪಟ್ಟಿತು. ಕಳೆದ ಮಂಗಳವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.





