Mysore
25
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

DCM DK Shivakumar

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನೆಹರು ತಾರಾಲಯದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಭೂ ಪರಿಹಾರ ವಿತರಣೆ ಮಾಡಿ ಅವರು ಮಾತನಾಡಿದರು.

ಬಡಾವಣೆಯು 3700 ಎಕರೆಯಲ್ಲಿ ನಿರ್ಮಾಣವಾಗಿದೆ. 3 ಕೋಟಿಯಷ್ಟು ಚದರ ಅಡಿ ನಿವೇಶನವನ್ನು ರೈತರಿಗೆ ಹಂಚಿಕೆ ಮಾಡಲಾಗುತ್ತಿದೆ. 2008ರಿಂದೀಚೆಗೆ ಸಮಯ ವ್ಯರ್ಥವಾಗಿದೆ. ಪ್ರತಿಯೊಂದರ ಬೆಲೆಯೂ ಹೆಚ್ಚಳವಾಗಿದೆ. ಹಾಗಾಗಿ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಗೆ ಸಮಯಾವಕಾಶ ಅಗತ್ಯವಿದೆ ಎಂದು ಹೇಳಿದರು.

Tags:
error: Content is protected !!