ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಈಗಾಗಲೇ ಜಲಾವೃತಗೊಂಡು ಜನಜೀನವ ಅಸ್ತವ್ಯಸ್ತಗೊಂಡಿದೆ, ಹಲವು ಅವಘಡಗಳು ಸಂಭವಿಸಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, 16 ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ರಕ್ಷಣಾ ತಂಡ ಅವಶೇಷಗಳನ್ನು ತೆರವುಗೊಳಿಸುವ ಕೆಲಸವನ್ನು ಆರಂಭಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.