Mysore
27
scattered clouds

Social Media

ಬುಧವಾರ, 21 ಜನವರಿ 2026
Light
Dark

ಕಂದಕಕ್ಕೆ ಉರುಳಿದ ಕಂಟೈನರ್‌ : ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರು ಗಂಭೀರ

ಆನೇಕಲ್‌ : ಕಂಟೈನರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ ನಡೆದಿದೆ.

ಬೆಳಗ್ಗೆ 11 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ರಸ್ತೆಯ ಕೇಬಲ್ ಡ್ರಿಲ್ಲಿಂಗ್ ಮಿಷನ್ ತುಂಬಿದ್ದ ಕಂಟೈನರ್ ಇಳಿಜಾರಿನ ತಿರುವಿನಲ್ಲಿ ಅತಿವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆಯ ಪರಿಣಾಮ ಇಬ್ಬರು ಕಾರ್ಮಿಕರು ಕಂಟೈನರ್ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನು ಓದಿ: ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಸದ್ಯ ಗಾಯಾಳುಗಳಿಗೆ ಜಿಗಣಿಯ ವಿಜಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಎರಡು ಕ್ರೇನ್ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಾರ್ಖಂಡ್ ಮೂಲದ ಶ್ರೀಮಾನ್ (25), ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ (26) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಕಂಟೈನರ್ ಚಾಲಕನಾಗಿದ್ದು, ಶ್ರೀಮಾನ್ ಕೇಬಲ್ ಡ್ರಿಲ್ಲಿಂಗ್ ಮಿಷನ್ ಆಪರೇಟರ್ ಆಗಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!