ಬೆಂಗಳೂರು : ನಮ್ಮ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ.
ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ತಂತ್ರಜ್ಞಾನ ಹಾಗೂ ಹೊಸ ಉದ್ಯಮ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸಂಸ್ಥೆಯಿಂದ ಬಿಡದಿಯಲ್ಲಿ ಸ್ಥಾಪಿತವಾದ ತಾಂತ್ರಿಕ ತರಬೇತಿ ವಿಭಾಗ ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ, ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲಿದೆ. ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…