ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ.
ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ಬೆನ್ನಲ್ಲೇ ರಾಜ್ಯಪಾಲರು 6 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಯವರಿಗೆ ದೂರು ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ರಾಜ್ಯಪಾಲರು ವಾಪಸ್ ಕಳುಹಿಸಿರುವ ಮಸೂದೆಗಳನ್ನು ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡರಲ್ಲೂ ಅಂಗೀಕರಿಸಲಾಗಿದೆ. ರಾಜ್ಯಪಾಲರು ಈ ಮಸೂದೆಗಳ ಬಗ್ಗೆ ವಿವರಣೆ ಕೇಳಿದ್ದರೆ ನಾವು ನೀಡುತ್ತಿದ್ದೆವು. ಆದರೆ ಮಸೂದೆಗಳನ್ನು ವಾಪಸ್ ಕಳುಹಿಸಲಾಗಿದೆ. ಹೀಗಾಗಿ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕಿಡಿಕಾರಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…