ರಾಜ್ಯ

ಬೆಂಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ: ರಸ್ತೆಗಳೆಲ್ಲಾ ಜಲಾವೃತ

ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ.

ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್‌ ಅಪಾರ್ಟ್‌ಮೆಂಟ್‌ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.

ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್‌ ಕಾಲೋನಿಯ ರೈಲ್ವೆ ಅಂಡರ್‌ಪಾಸ್‌, ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌, ಸಿ.ಐ.ಎಲ್‌ ಬಡವಾಣೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೆರೆಗಳೇ ಸೃಷ್ಟಿಯಾಗಿದೆ. ಇನ್ನುಳಿದಂತೆ ಎ.ಜಿ ರೋಡ್‌, ರೇಸ್‌ ಕೋರ್ಸ್‌, ಮಲ್ಲೇಶ್ವರಂ, ಯಶವಂತಪುರ, ಬಾಣಸವಾಡಿ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ.

ಬುಧವಾರ ಸಂಜೆ ಸುರಿದ ಧಾರಾಕಾರ ಮಳೆ ರಾಮಕೃಷ್ಣನಗರ, ಫಯಾಜಾಬಾದ್‌ ಹಾಗೂ ಹಲಚೇನಹಳ್ಳಿಯಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಜೊತೆಗೆ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

11 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

22 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

34 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

41 mins ago

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

2 hours ago

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

2 hours ago