ಮಡಿಕೇರಿ: ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಮಲೆನಾಡಿನಲ್ಲಿ ವರುಣ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಲ್ಲಿ ಭಾರಿ ಮಳೆ ಸುರಿಯುತ್ತಿದೆ.
ಈ ಹಿನ್ನೆಲೆ ಇಂದು (ಜು.೧೫ ರಂದು) ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಆಯಾ ಜಿಲ್ಲೆಗಳ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





