ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಹಿಂದೆ ನಟ ದರ್ಶನ್‌ಗೆ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿತ್ತು. ಹೀಗಿದ್ದರೂ ಈ ಕಾರಾಗೃಹದಲ್ಲಿ ಕೈದಿ ಹಾಗೂ ವಿಚಾರಣಾ ಕೈದಿಗಳಿಗೆ ಮೊಬೈಲ್ ಜೊತೆಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಸೇರಿದಂತೆ ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದನ್ನು ಓದಿ: ‘ಬಾಸ್’ ಆಗಿ ಬಂದ ತನುಷ್ ಶಿವಣ್ಣ; ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಸಂಬಂಧವಿದೆಯಾ?
ನಟ ದರ್ಶನ್ ಅವರಿಗೆ ಕಾರಾಗೃಹದಲ್ಲಿ ಹಾಸಿಗೆ ಮತ್ತು ದಿಂಬು ಪಡೆಯಲು ಕಷ್ಟವಾಗುತ್ತಿರುವ ಸಂದರ್ಭದಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಜೈಲಿನೊಳಗೆ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು, ಟಿವಿ ವೀಕ್ಷಿಸುತ್ತಿರುವ ವಿಡಿಯೋ ಕಂಡು ಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ವಿಕೃತಕಾಮಿ ಉಮೇಶ್‌ರೆಡ್ಡಿ ಟಿವಿ ನೋಡುತ್ತಾ ಕೀಪ್ಯಾಡ್ ಮೊಬೈಲ್‌ಗಳನ್ನು ಇಟ್ಟುಕೊಂಡು ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತನಾಗಿರುವ ರನ್ಯಾರಾವ್ ಸ್ನೇಹಿತ ಆರೋಪಿ ತರುಣ್ ರಾಜ್ ಕಾರಾಗೃಹದೊಳಗೆ ಟಿವಿ ನೋಡುತ್ತಾ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…