Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆ : 80 ಮನೆ ಜಲಾವೃತ

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

80ಕ್ಕೂ ಅಧಿಕ ಮನೆಗಳು ಸೌಪರ್ಣಿಕ ನದಿ ಪಾಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ನೆರೆ ಪೀಡಿತ ಪ್ರದೇಶಗಳಲ್ಲಿ ಅಗ್ನಿಶಾಮಕ ದಳದಿಂದ ಮೊಕ್ಕಾಂ ಹೂಡಿದೆ.

ಸಾರ್ವಜನಿಕರೂ ಸೇರಿದಂತೆ ಜಾನುವಾರುಳು ಜಲದಿಗ್ಬಂಧನಕ್ಕೊಳಗಾಗಿದ್ದಾರೆ. ಅಗ್ನಿಶಾಮಕದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದಾರೆ.

ಬೋಟ್‌ ಮೂಲಕದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತ ಮಾಡಲಾಗುತ್ತಿದೆ.

ಜಿಲ್ಲಾಡಳಿತದಿಂದ 5ಪುನರ್ವಸತಿ ಕೇಂದ್ರಗಳ್ನು ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರು ಜಾನವಾರುಗಳನ್ನು ಬಿಟು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳುಲು ನಿರಾಕರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

 

Tags: