Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅನ್ನದಾತರಿಗೆ ಮತ್ತೊಂದು ಗುಡ್‌ನ್ಯೂಸ್:‌ ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್‌

ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್‌ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್‌ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್‌ ಹೇಳಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ ವಿದ್ಯುತ್‌ ನೀಡುವುದು ಅಗತ್ಯವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವುದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸದ್ಯ ಫಾರ್ಮ್‌ಹೌಸ್‌ಗಳಿಗೆ ಏಳು ಗಂಟೆಗಳ ತ್ರಿಫೇಸ್‌ ವಿದ್ಯುತ್‌ ಸಿಗುತ್ತಿದೆ. ದಿನದ ಉಳಿದ ಅವಧಿಯಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6ರವರೆಗೆ ಸಿಂಗಲ್‌ ಫೇಸ್‌ ಓಪನ್‌ ಡೆಲ್ಟಾ ಮಾದರಿಯಲ್ಲಿ ವಿದ್ಯುತ್‌ ನೀಡಲಾಗುತ್ತಿದೆ ಎಂದರು.

ಇನ್ನು ರಾಜ್ಯದಲ್ಲಿ ಕಳೆದ ವರ್ಷ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್‌ ಸಮಸ್ಯೆ ಎದುರಾಗಿತ್ತು. ಆದರೆ, ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್‌ ಹಾಗೂ ಉತ್ತರ ಪ್ರದೇಶಗಳ ಜೊತೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್‌ ಪೂರೈಸಲು ಇಲಾಖೆ ಸನ್ನದ್ಧವಾಗಿದೆ ಎಂದರು.

Tags:
error: Content is protected !!