ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.
ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ ವಿದ್ಯುತ್ ನೀಡುವುದು ಅಗತ್ಯವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸದ್ಯ ಫಾರ್ಮ್‌ಹೌಸ್‌ಗಳಿಗೆ ಏಳು ಗಂಟೆಗಳ ತ್ರಿಫೇಸ್ ವಿದ್ಯುತ್ ಸಿಗುತ್ತಿದೆ. ದಿನದ ಉಳಿದ ಅವಧಿಯಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6ರವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದರು.
ಇನ್ನು ರಾಜ್ಯದಲ್ಲಿ ಕಳೆದ ವರ್ಷ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆ ಎದುರಾಗಿತ್ತು. ಆದರೆ, ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ಜೊತೆ ವಿದ್ಯುತ್ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ಧವಾಗಿದೆ ಎಂದರು.
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…