ರಾಜ್ಯ

ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ತನಿಖೆಗೆ ಆಗ್ರಹಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ಕೊಲೆ ಬೆದರಿಕೆ ಆರೋಪ ಮಾಡಿ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್‌ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ನನಗೆ ಈ ವಿಚಾರ ಗೊತ್ತಾಗಿದ್ದು ಈಗ. ಕಾಂಗ್ರೆಸ್‌ನವರೇ ಇರಲಿ. ನನ್ನ ಆಪ್ತನೇ ಆಗಿರಲ್ಲಿ. ಇದನ್ನು ಇಲ್ಲಿಗೆ ಬಿಡುವ ಮಾತೇ ಇಲ್ಲ. ತನಿಖೆ ಮಾಡಿಸುತ್ತೇನೆ. ನಾನು ಯಾವುದೇ ಮುಚ್ಚುಮರೆ ಮಾಡಲ್ಲ. ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯಾಗಲಿ ಎಂದು ಗೃಹ ಸಚಿವರಿಗೂ ಮನವಿ ಮಾಡುತ್ತೇನೆ. ತನಿಖೆ ನಡೆದ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ ಎಂದರು.

ಪ್ರಕರಣದ ಹಿನ್ನೆಲೆ: ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತನ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ ಬಾಲ್ಕಿ ಮೂಲದ ಗುತ್ತಿಗೆದಾರ ಸಚಿನ್‌ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.

ಸಚಿನ್‌ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತಲೂ ಮುಂಚೆ 7 ಪುಟಗಳ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಟೆಂಡರ್‌ ಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ. ಬಳಿಕ ಮತ್ತೆ 1 ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದು, ರಾಜು ಬೆದರಿಕೆ ಹಾಕಿದ್ದಾರೆ. ಹಣ ನೀಡದಿದ್ದರೇ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್‌ ಗಂಭೀರ ಆರೋಪ ಮಾಡಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

8 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

9 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

9 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

9 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

10 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

10 hours ago