ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್, ನಂತರ ಅಧಿಕಾರಕ್ಕೇರಿತ್ತು. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ, ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ ಎಂದು ಗುತ್ತಿಗೆದಾರರು ಸಿಡಿದೆದ್ದಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆದಾದರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಜಾಸ್ತಿಯಾಗಿದೆ. ಆದರೆ, 60, 80 ಪರ್ಸೆಂಟ್ ಎಂದು ನಾವು ಹೇಳಿಲ್ಲ ಎಂದಿದ್ದಾರೆ. 52 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಿತ್ತು. ಕೆಲ ಇಲಾಖೆಗಳು ಹಣ ಬಿಡುಗಡೆ ಮಾಡಿದ್ದು, 33 ಸಾವಿರ ಕೋಟಿ ರೂ. ಬಾಕಿ ಇದೆ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಇನ್ನೊಂದು ತಿಂಗಳು ಕಾಯುತ್ತೇವೆ. ಆಗಲೂ ಹಣ ಬಿಡುಗಡೆಯಾಗಿಲ್ಲ ಎಂದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…