ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದರು. ಆದರೆ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೆಂಪಣ್ಣ ಅವರು ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಇದು ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.
ಇದಲ್ಲದೇ ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧವು 40% ಕಮಿಷನ್ ಆರೋಪ ಮಾಡಿದ್ದರು.