ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು, ಸಚಿನ್ ಕಾಂಟ್ರಾಕ್ಟರ್ ಅಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅವರು ಡೆತ್‌ನೋಟ್‌ನಲ್ಲಿ ಏನು ಬರೆದಿಟ್ಟಿದ್ದಾರೆ? ಡೆತ್‌ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷಗಳು ಪದೇ ಪದೇ ಟಾರ್ಗೆಟ್ ಮಾಡುತ್ತಿವೆ. ಪ್ರಿಯಾಂಕ್ ಖರ್ಗೆ ಸ್ವಲ್ಪ ಆಕ್ಟೀವ್ ಇದ್ದಾರೆ. ಇದನ್ನು ವಿಪಕ್ಷಗಳು ಸಹಿಸಿಕೊಳ್ಳುತ್ತಿಲ್ಲ. ಹಾಗಾಗಿ ಅವರನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಉಪಚುನಾವಣೆ ಬಳಿಕ ಸ್ವಲ್ಪ ನರ್ವಸ್ ಆಗಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಉಪಚುನಾವಣೆ ಆದ ಮೇಲೆ ರಾಜ್ಯದ ಪರಿಸ್ಥಿತಿ ಬದಲಾಗಿದೆ. ಸದ್ಯದಲ್ಲೇ ಅವರ ಹೇಳಿಕೆಗಳೂ ಬದಲಾಗಬಹುದು ಎಂದು ಕಿಡಿಕಾರಿದರು.
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…