ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್ ಕುಮಾರ್ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್ ಆಗಿದ್ದಾರೆ.
ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಕುಮಾರ್ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ನಡುವೆ ಚೇತನ್ ಕುಮಾರ್ ಅಹಿಂಸಾ, ಸ್ವಾಮಿ ವಿವೇಕಾನಂದ ಸಮಾನತಾವಾದಿಯಲ್ಲ, ಅವರು ನಮ್ಮವರಲ್ಲ ಎಂದು ಟ್ವೀಟ್ ಮಾಡುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದಾರೆ.
ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದ ವ್ಯಕ್ತಿ ಅದರೊಂದಿಗೆ ಜಾತಿ ವ್ಯವಸ್ಥೆಯ ಪರವಾಗಿ ಮಾತನಾಡಿದ್ದರು ಎಂದು ಚೇತನ್ ಬರೆದುಕೊಂಡಿದ್ದಾರೆ.
‘ಇಂದು ವಿವೇಕಾನಂದರ ಜನ್ಮದಿನ. ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದವರು ಮತ್ತು ಜಾತಿ ವ್ಯವಸ್ಥೆಯನ್ನು ಸರ್ಮಥನೆ ಮಾಡಿಕೊಂಡವರು. ಅವರೇ ಬರೆದ ಹಾಗೆ, ‘ಜಾತಿ ಒಳ್ಳೆಯದು, ಅದೊಂದೇ ಜೀವನವನ್ನು ಪರಿಹರಿಸುವ ನೈಸರ್ಗಿಕ ಮಾರ್ಗವಾಗಿದೆ’ ಎನ್ನುತ್ತಾರೆ.
ವಿವೇಕಾನಂದರನ್ನು ಹಿಂದೂ ಸಮಾಜದಿಂದ ವೈಭವೀಕರಿಸಲಾಗಿದೆ. ಏಕೆಂದರೆ, ಅವರು ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯನ್ನು ಬಲಪಡಿಸುವ ಪರವಾಗಿ ಇದ್ದವರು. ವಿವೇಕಾನಂದರು ಸಮಾನತಾವಾದಿಯಲ್ಲ.. ಅವರು ನಮ್ಮವರಲ್ಲ’ ಎಂದು ತಮ್ಮ ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಅದರೊಂದಿಗೆ ಹಿಂದುತ್ವದ ಪರವಾಗಿರುವ ವೀರ್ ಸಾವರ್ಕರ್ ಹಾಗೂ ಆ
ರೆಸ್ಸೆಸ್‌ಗಿಂತ ಹಿಂದೂ ಉದಾರವಾದಿಗಳಾದ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಅವರು ತುಂಬಾ ಡೇಂಜರಸ್ ಎಂದು ಬರೆದಿದ್ದಾರೆ. ಹಿಂದು ಉದಾರವಾದಿಗಳನ್ನು ಅಪ್ರಾಮಾಣಿಕರು/ಕುತಂತ್ರವಾದಿ ಸ್ನೇಹಿತರು ಎಂದು ಚೇತನ್ ಬರೆದಿದ್ದಾರೆ.
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…